ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀ‌ನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ

ಸಮಗ್ರ ನ್ಯೂಸ್: ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

Ad Widget ... ..

ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ ಜಿ. ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ ಹಾಗೂ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದ್ದರು. ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

Ad Widget

ಈ ಪತ್ರಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನಸಭೆಯಲ್ಲಿ ಸಭಾಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ ಮಾಡಬಹುದಾದರೆ ಗ್ರಾಮ ಪಂಚಾಯತಿಗಳಲ್ಲಿ ತುಳು ಮಾತನಾಡಬಾರದೆಂದರೆ ಏನರ್ಥ? ಈ ಸರ್ಕಾರಕ್ಕೆ ಏನಾಗಿದೆ ಎಂಬುದೇ ಅರ್ಥ ಆಗುತ್ತಿಲ್ಲ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೇ ಹೊರತು ಇದೇ ಭಾಷೆ ಮಾತಾಡಬೇಕು ಎಂದು ಹೇರಿಕೆ ಮಾಡುವುದು ಸರಿಯಲ್ಲ. ಎಂಕ್ಲೆನ ಪೆರ್ಮೆದ ತುಳುವನಾಡ್, ತುಳು ಭಾಷೆ ಎಂಕ್ಲೆನ ಪೆರ್ಮೆ… ಎಂದು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ತುಳು ಭಾಷೆ – ಕನ್ನಡ ನಾಡಿನ ಮಣ್ಣಿನ ಭಾಷೆ. ನಮ್ಮ ಕರ್ನಾಟಕದಲ್ಲಿ ತುಳು ಮಾತನಾಡಬಾರದು ಎನ್ನುವ ಸರ್ಕಾರದ ಆದೇಶ! ಹಾಗಾದರೆ, ಉರ್ದು ಭಾಷೆಯ ಬಳಕೆ ಸರಕಾರೀ ಕಡತದಲ್ಲಿ ಮಾಡಬಹುದೇ ? ಮಿಸ್ಟರ್ ಟ್ರೊಲ್ ಮಿನಿಸ್ಟರ್ ಎಲ್ಲಿದ್ದೀರಾ ? ಎಂದು ಪ್ರಶ್ನಿಸಿದ್ದಾರೆ.

Leave a Comment

Your email address will not be published. Required fields are marked *