ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಹಲವು ವಿಶೇಷ ಕಾರಣಕ್ಕೆ ಸುದ್ದಿಯಲ್ಲಿದ್ದು, ಇಲ್ಲೊಬ್ಬ ವ್ಯಕ್ತಿ ಬರೆದಿರುವ ಪತ್ರ ಇದೀಗ ಎಲ್ಲೆಡೆ ಹೊಸ ಚರ್ಚೆ ಹುಟ್ಟುಹಾಕಿದೆ. ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರವೊಂದರ ಆಸುಪಾಸಿನಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕಲು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಶರಣಾಗುವುದಾಗಿ ತಿಳಿಸಿರುವ ಪತ್ರವೊಂದು ವೈರಲ್ ಆಗಿದೆ.

Ad Widget ... ..

ವಕೀಲರ ಪತ್ರದ ಮೂಲಕ ಈ ವಿಷಯ ತಿಳಿದುಬಂದಿದ್ದು, ಪೊಲೀಸರು ವಕೀಲರನ್ನು ಸಂಪರ್ಕಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇನ್ನೂ ವಕೀಲರು ಆ ವ್ಯಕ್ತಿ ತಮ್ಮ ಸಂಪರ್ಕದಲ್ಲಿದ್ದು ಶರಣಾಗತಿ ಮಾಡಿಸುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ad Widget

ಗ್ರಾಮವೊಂದರಲ್ಲಿ ನಡೆದಿರುವ ಹಲವಾರು ಹತ್ಯೆ, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತ ದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿದ್ದಾನೆ.

ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದು, ಇತ್ತೀಚೆಗೆ ಹೊರ ತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ. ಇದು ಸಾರ್ವಜನಿಕ ಮಾಹಿತಿಗಾಗಿ ಎಂದು ನಾಗರಾಜ್ ಪಿಎನ್, ಓಜಸ್ವಿ ಗೌಡ ಹಾಗೂ ಸಚಿನ್ ಎಸ್ ದೇಶಪಾಂಡೆ ಎಂಬವರ ಸಹಿಯುಳ್ಳ ಪತ್ರ ವೈರಲ್ ಆಗಿದೆ.

Leave a Comment

Your email address will not be published. Required fields are marked *