12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ವಿರುದ್ಧ ಇರಾನ್ ಕದನ ವಿರಾಮ ಘೋಷಿಸಿದ್ದು, ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಇರಾನ್ ಸಹ ಯುದ್ಧ ವಿರಾಮ ಘೋಷಿಸಿದೆ.

Ad Widget ... ..

ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ. 12 ದಿನಗಳ ಯುದ್ಧ ಮುಗಿದಿದ್ದು, ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ.

Ad Widget

ಇಸ್ರೇಲ್‌ನ ಆಕ್ರಮಣಕ್ಕೆ ತಕ್ಕ ಶಿಕ್ಷೆ ವಿಧಿಸಲು ನಮ್ಮ ಪ್ರಬಲ ಸಶಸ್ತ್ರ ಪಡೆಗಳ ಮಿಲಿಟರಿ ಕಾರ್ಯಾಚರಣೆಗಳು ಕೊನೆಯ ನಿಮಿಷದವರೆಗೆ ಅಂದರೆ, ಬೆಳಗ್ಗೆ 4 ಗಂಟೆಯವರೆಗೂ ಮುಂದುವರೆದವು. ನಮ್ಮ ಪ್ರೀತಿಯ ದೇಶವನ್ನು ತಮ್ಮ ಕೊನೆಯ ರಕ್ತದ ಹನಿಯವರೆಗೂ ರಕ್ಷಿಸಲು ಸಿದ್ಧರಾಗಿರುವ ಮತ್ತು ಶತ್ರುಗಳ ಯಾವುದೇ ದಾಳಿಗೆ ಕೊನೆಯ ಕ್ಷಣದವರೆಗೂ ಪ್ರತಿಕ್ರಿಯಿಸಿದ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳಿಗೆ ಎಲ್ಲ ಇರಾನಿಯನ್ನರೊಂದಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್​ ಮಾಡಿದ್ದ ಅರಘ್ಚಿ, ಇರಾನ್ ಪದೇ ಪದೆ ಸ್ಪಷ್ಟಪಡಿಸಿದಂತೆ, ಇಸ್ರೇಲ್ ಮೊದಲು ಇರಾನ್ ಮೇಲೆ ಯುದ್ಧ ಆರಂಭಿಸಿತು. ಸದ್ಯಕ್ಕೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಬಗ್ಗೆ ಯಾವುದೇ ‘ಒಪ್ಪಂದ’ ಇಲ್ಲ. ಆದಾಗ್ಯೂ, ಇಸ್ರೇಲ್ ಆಡಳಿತವು ಇರಾನ್ ಜನರ ವಿರುದ್ಧ ತನ್ನ ಕಾನೂನುಬಾಹಿರ ಆಕ್ರಮಣವನ್ನು ಟೆಹರಾನ್​ನ ಸಮಯ ಬೆಳಗ್ಗೆ 4 ಗಂಟೆಯೊಳಗೆ ನಿಲ್ಲಿಸಿದರೆ, ನಂತರ ನಮ್ಮ ಪ್ರತಿದಾಳಿಯನ್ನು ಮುಂದುವರಿಸುವ ಉದ್ದೇಶ ನಮಗಿಲ್ಲ ಎಂದು ಹೇಳಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ ತಮ್ಮ ಸೇನೆಗೆ ಧನ್ಯವಾದ ಸಲ್ಲಿಸುವ ಮೂಲಕ ಕದನ ವಿರಾಮದ ಸುಳಿವು ನೀಡಿದ್ದಾರೆ. ಈ ಮೂಲಕ 12 ದಿನಗಳ ಯುದ್ಧಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ.

Leave a Comment

Your email address will not be published. Required fields are marked *