ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ ವೈರಲ್| ಎಸ್ಪಿ ಭೇಟಿ ಮಾಡಿದ ವಕೀಲರ ನಿಯೋಗ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ ಭೇಟಿ ಮಾಡಲು ಮಂಗಳೂರಿಗೆ ಆಗಮಿಸಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿತ್ತು. ಇದೀಗ ವೈರಲ್ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್‌ ಎಸ್‌. ದೇಶಪಾಂಡೆ ನಿಯೋಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅರುಣ್ ಅವರನ್ನು ಭೇಟಿಯಾಗಲು ಆಗಮಿಸಿತ್ತು. ಆದರೆ ಎಸ್ಪಿ ಅನುಪಸ್ಥಿತಿ ಹಿನ್ನಲೆ ತಂಡಕ್ಕೆ ಎಸ್ಪಿ ಭೇಟಿ ಸಾಧ್ಯವಾಗಿಲ್ಲ. ಈ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿದ ವಕೀಲರು ಪತ್ರ ನಮ್ಮ ಮೂಲಕವೇ ಬರೆದಿದ್ದು, ಎಸ್ಪಿ ಅವರ ಜೊತೆ ಮಾತನಾಡಲು ಬಂದಿದ್ದೇವೆ. ನಮ್ಮ ಎಸ್ಪಿ ಜೊತೆ ಮಾತನಾಡಲು ಇರುವ ವಿಚಾರದ ಬಗ್ಗೆ ಸದ್ಯ ಯಾವುದೇ ಮಾಹಿತಿ ನೀಡುವುದಿಲ್ಲ ಎಂದರು.

Ad Widget

ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿತ್ತು. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ. ಇತ್ತೀಚೆಗೆ ಹೊರತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ. ಸದ್ಯ ವಕೀಲರು ಇದೀಗ ಎಸ್ಪಿ ಭೇಟಿ ಮಾಡಲು ಆಗಮಿಸಿದ್ದು, ಈ ಪ್ರಕರಣ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *