ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ/ ಜೂನ್ 30ರಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಕೃಷ್ಣರಾಜಸಾಗರ ಜಲಾಶಯವು ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ಹೊಸ ದಾಖಲೆ ಸೃಷ್ಟಿಸಿದ್ದು, ಈ ಸಂಭ್ರಮದ ಅಂಗವಾಗಿ ಜೂನ್ 30ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದಾರೆ.

Ad Widget ... ..

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸವನ್ನು ಹೆಚ್ಚಿಸಿದೆ.
ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಪ್ರಸ್ತುತ 121 ಅಡಿ ನೀರಿದ್ದು, ಭರ್ತಿಗೆ 3 ಅಡಿ ಮಾತ್ರ ಬಾಕಿ ಇದೆ. ಜೂನ್ 29ರ ವೇಳೆಗೆ ಡ್ಯಾಂ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಯಿದೆ ಎನ್ನುತ್ತಾರೆ ಎಂಜಿನಿಯರ್‌ಗಳು. ಜಲಾಶಯಕ್ಕೆ ಪ್ರಸ್ತುತ 52 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 51 ಸಾವಿರ ಕ್ಯೂಸೆಕ್ ನೀರನ್ನು ಡ್ಯಾಂನಿಂದ ನದಿಗೆ ಬಿಡಲಾಗುತ್ತಿದೆ. ಈ ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಮುಖ್ಯವಾಗಿ ನೀರಾವರಿಗೆ ಮತ್ತು ಕುಡಿಯುವ ನೀರಿಗೆ ಬಳಸಲಾಗುತ್ತಿದೆ.

Ad Widget

Leave a Comment

Your email address will not be published. Required fields are marked *