ಸಮಗ್ರ ನ್ಯೂಸ್: ಕೋಲ್ಕತ್ತಾದ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿ ಮನೋಜಿತ್ ಮಿಶ್ರಾ, ಪ್ರಮಿತ್ ಮುಖರ್ಜಿ, ಝೈಬ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳಾಗಿದ್ದು, ಓರ್ವ ಹಳೆ ವಿಧ್ಯಾರ್ಥಿಯಾಗಿದ್ದಾನೆ ಎಂದು ವರದಿಯಾಗಿದೆ.
ಜೂನ್ 25 ರಂದು ಕೋಲ್ಕತ್ತದ ಕಸ್ಬಾದಲ್ಲಿ ಈ ಘಟನೆ ನಡೆದಿದೆ ಎಂದು ‘ದಿ ಟೆಲಿಗ್ರಾಫ್’ ವರದಿ ಮಾಡಿದೆ. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ. ಹಳೆಯ ವಿದ್ಯಾರ್ಥಿಯೇ ಪ್ರಮುಖ ಆರೋಪಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.
ಕೋಲ್ಕತ್ತಾದ ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಯಾಗಿತ್ತು. ಘಟನೆಯ ನೆನಪು ಮಾಸುವ ಮೊದಲು ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ ಇಂತಹ ಘಟನೆ ನಡೆದಿದೆ.
ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗಳನ್ನು ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.







