ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ
ಸಮಗ್ರ ನ್ಯೂಸ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ, ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ Read More »





