June 2025

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು, ಜುಲೈ 14, 2025ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಆದೇಶದ ಆಧಾರದ ಮೇಲೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ. ಸಂವಿಧಾನದ 145ನೇ ವಿಧಿಯಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, 2013ರ ಆದೇಶದ ಕ್ಲಾಸ್ 2ರ ನಿಯಮಗಳನ್ನು ತಿದ್ದುಪಡಿ […]

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು Read More »

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ| 15 ವರ್ಷಗಳ ಬಳಿಕ ಚಿಗುರಿದ ಕರುಳ ಕುಡಿಗೆ ಎಳ್ಳುನೀರು!!

ಸಮಗ್ರ ನ್ಯೂಸ್: ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ| 15 ವರ್ಷಗಳ ಬಳಿಕ ಚಿಗುರಿದ ಕರುಳ ಕುಡಿಗೆ ಎಳ್ಳುನೀರು!! Read More »

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ

ಸಮಗ್ರ ನ್ಯೂಸ್: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿದ್ದು, ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಇದೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ Read More »

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ Read More »

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ Read More »

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ

ಸಮಗ್ರ ನ್ಯೂಸ್: ಲಾರಿಯನ್ನು ಬಾಡಿಗೆ ಓಡಿಸಲು ನೀಡಿದರೆ ಡ್ರೈವರ್ ಮಾತ್ರ ಅದನ್ನು ತೆಗೆದುಕೊಂಡು ಹೋಗಿ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ಕಿರಣ್ ಪ್ರಕರಣದ ಆರೋಪಿಗಳು ಎಂದು ತಿಳಿದುಬಂದಿದೆ. ಕಳೆದ ಮಾರ್ಚ್‌ನಲ್ಲಿ ಲಾರಿ ಮಾಲೀಕರು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ Read More »

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಬ್ದುಲ್ ಬಾಶಿತ್ ಜಪಾನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಈ ಮೂಲಕ ಗ್ರಾಮೀಣ ವಿದ್ಯಾರ್ಥಿಯೊಬ್ಬರು ರಾಷ್ಟ್ರವನ್ನು ಪ್ರತಿನಿಧಿಸಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಡವಿನಬಾಗಿಲು ನಿವಾಸಿ ಇಲಿಯಾಸ್ ಪಾಷ ಹಾಗೂ ಸಬಿಯಾ ಎಂಬುವರ ಪುತ್ರ ನಿವಾಸಿ ಅಬ್ದುಲ್ ಬಾಸಿತ್ ತಾನು ಅನ್ವೇಷಿಸಿದ ‘ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿಯನ್ನು ಜಪಾನ್‌ನಲ್ಲಿ ಜೂನ್ 15ರಿಂದ 21ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ವಿಜ್ಞಾನ ಸಮ್ಮೇಳನ ‘ಸುಕುರಾ’ದಲ್ಲಿ

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ Read More »

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ

ಸಮಗ್ರ ನ್ಯೂಸ್: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ. X ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಗಸ್ಟ್ 15, 2025 ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದರು. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮತ್ತು

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ Read More »

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು

ಸಮಗ್ರ ನ್ಯೂಸ್: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು Read More »

ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ‌ ದಂಪತಿ

ಸಮಗ್ರ ನ್ಯೂಸ್: ತಮ್ಮ ಪತ್ನಿಗಾಗಿ ಚಿನ್ನದ ಮಂಗಳಸೂತ್ರ ಖರೀದಿಸಲು ಆಭರಣದ ಅಂಗಡಿಗೆ ಬಂದಿದ್ದ ವೃದ್ಧರೊಬ್ಬರು, ತಮ್ಮಲ್ಲಿನ ಸಂಪೂರ್ಣ ಉಳಿತಾಯವನ್ನು ಅಂಗಡಿ ಮಾಲೀಕರಿಗೆ ನೀಡಿದ್ದಾರೆ. ಆದರೆ, ಆ ಹಣ ಮಂಗಳಸೂತ್ರದ ಬೆಲೆಗೆ ಸಾಕಾಗಲಿಲ್ಲ. ಆಗ ಆಭರಣ ವ್ಯಾಪಾರಿ ಮಾಡಿದ ಕೆಲಸ ಎಲ್ಲರ ಹೃದಯವನ್ನು ತಟ್ಟಿದೆ. ವೃದ್ಧ ಮಹಿಳೆಗೆ ಬಹಳ ದಿನಗಳಿಂದ ಚಿನ್ನದ ಮಂಗಳಸೂತ್ರ ಖರೀದಿಸುವ ಆಸೆಯಿತ್ತು. ಪತ್ನಿಯ ಈ ಆಸೆಯನ್ನು ಈಡೇರಿಸಲು, ವೃದ್ಧ ವ್ಯಕ್ತಿ ಪಂಢರಪುರಕ್ಕೆ ತೀರ್ಥಯಾತ್ರೆಗೆ ಬಂದಿದ್ದಾಗ ಆಭರಣ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಮಂಗಳಸೂತ್ರ ಖರೀದಿಸಲು ತಮ್ಮಲ್ಲಿದ್ದ

ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ‌ ದಂಪತಿ Read More »