ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನು ರೀತಿಯಲ್ಲಿ ಅವಕಾಶ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Ad Widget

ಸಭೆಯ ಆರಂಭದಲ್ಲಿ ಶಾಸಕರು, ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪಿಸಿ ಸಕ್ರಮ ಮರಳು ಗಣಿಗಾರಿಕೆ ಮತ್ತು ಕೆಂಪು ಕಲ್ಲು ತೆಗೆಯಲು ಅವಕಾಶ ನೀಡುವಂತೆ ಒತ್ತಾಯಿಸಿದಾಗ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಭೆ ನಡೆಯುವ ಮೊದಲು ದಕ್ಷಿಣ ಕನ್ನಡ ಡಿಸಿ ಅವರು ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ಅಭಾವದ ಬಗ್ಗೆ ಸಭೆ ನಡೆಸಲಿ. ಮರಳು ಮತ್ತು ಕೆಂಪು ಕಲ್ಲು ತೆಗೆಯಲು ಮರು ಟೆಂಡರ್ ಮಾಡುವ ಬ್ಲಾಕ್ ಗಳ ಪರವಾನಿಗೆ ಪಟ್ಟಿಯನ್ನು ಒಳಗೊಂಡಂತೆ ವರದಿ ಸಲ್ಲಿಸಬೇಕು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಆಯುಕ್ತರೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಮರಳು ಮತ್ತು ಕೆಂಪು ಕಲ್ಲು ತೆಗೆಯುವ ಕಾನೂನು ಪ್ರಕ್ರಿಯೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *