ಸಮಗ್ರ ನ್ಯೂಸ್: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದೆ.
ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಈ ನಿರ್ಧಾರ ಕೈಗೊಳ್ಳಲಾಗಿದೆ, ಪ್ರವಾಸಿಗರು 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದರು. ಆದರೆ ಕಾಡುಪ್ರಾಣಿಗಳ ಕಾಟ, ಭಾರೀ ಮಳೆ , ಜಾರುವ ಪ್ರದೇಶದವಾದ್ದರಿಂದ ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ ಎಂದು ಅರಣ್ಯ ಇಲಾಖೆ ತಿಳಿಸಿದೆ.
1-07-2025 ರಿಂದ 31-07-2025 ರವರೆಗೆ ತಾತ್ಕಾಲಿಕ ತೆಡೆಯನ್ನು ಮಾಡಲಾಗಿದೆ. ಅಲ್ಲದೇ ಎತ್ತಿನಭುಜದಲ್ಲಿ ಓರ್ವ ಕಾವಲುಗಾರನನ್ನು ನೇಮಿಸಲು ಸೂಚನೆ ನೀಡಿದೆ ಎಂದು ಚಿಕ್ಕಮಗಳೂರು ಉಪ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.







