ಉಡುಪಿ ಜಿಲ್ಲೆಯ ‌ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅಹವಾಲು ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಜಿಲ್ಲಾಮಟ್ಟದಲ್ಲಿ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಸರಕಾರ ಮಾಡಲಿದೆ.

Ad Widget ... .. Ad Widget .

ಅದರಂತೆ ಉಡುಪಿ ಜಿಲ್ಲೆಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ಆದೇಶ ಹೊರಪಡಿಸಿದೆ.
ಈ ಹಿಂದೆ ಸತ್ಯವತಿ ಅವರು ಉಸ್ತುವಾರಿ ಕಾರ್ಯದರ್ಶಿಯಾಗಿದ್ದು, ಅವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದರಿಂದ ಹುದ್ದೆ ತೆರವಾಗಿತ್ತು. ಉಸ್ತುವಾರಿ ಕಾರ್ಯದರ್ಶಿಗಳು ಆಗಿಂದಾಗ್ಗೆ ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸುತ್ತಿರುತ್ತಾರೆ.

Ad Widget

Leave a Comment

Your email address will not be published. Required fields are marked *