ಭಾರೀ ಮಳೆ ಹಿನ್ನಲೆ| ಜು.4ರ‌ ಇಂದು ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೫ ತಾಲೂಕಿನ ಶಾಲೆ , ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು ಮತ್ತು ಬಂಟ್ವಾಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅರ್ಚನಾ ಭಟ್ ರಜೆ ಘೋಷಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮೂರು ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *