ರಾಜ್ಯಾದ್ಯಂತ ಜು.16ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

. Ad Widget . Ad Widget . Ad Widget .

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿದ್ದರೂ, ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ, ಕೆಲವು ಸ್ಥಳಗಳಲ್ಲಿ ತುಂತುರು ಮಳೆಯಾಗಬಹುದು ಎಂದು ತಿಳಿದುಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.

ಭಾರೀ ಮಳೆಯಾಗುವ ಜಿಲ್ಲೆಗಳಲ್ಲಿ ಸ್ಥಳೀಯ ಆಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಕಡಿಮೆ ಒಡಾಡುವಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ. ಕೃಷಿಕರು ಮತ್ತು ಮೀನುಗಾರರಿಗೆ ಹವಾಮಾನದ ಬಗ್ಗೆ ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ.

Leave a Comment

Your email address will not be published. Required fields are marked *