ಸರ್ಕಾರಿ‌ ಶಾಲಾ ಮಕ್ಕಳಿಗೆ ಉಚಿತ ‌ಬಸ್ | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.

. Ad Widget . Ad Widget . Ad Widget

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ.

. Ad Widget .

ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು.

ಬಡವರ ಮಕ್ಕಳು, ಹಳ್ಳಿಗಳ ಮಕ್ಕಳಿಗೆ ಶಾಲೆಗೆ ಹೋಗಲು ಈ ಯೋಜನೆಯಿಂದ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ ಮಾಡಿ ಎಂದು ಹಲವು ಬಾರಿ ವಿದ್ಯಾರ್ಥಿಗಳೇ ಸಿಎಂ, ಡಿಸಿಎಂಗೆ ಬೇಡಿಕೆಯಿಟ್ಟಿದ್ದರು. ಇದೀಗ ಸರ್ಕಾರ ಕೊನೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದೆ.

ಸರ್ಕಾರೀ ಶಾಲೆಗಳ ಸಬಲೀಕರಣಕ್ಕೆ ಇದೊಂದು ದಿಟ್ಟ ಹೆಜ್ಜೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *