ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ದಫನ ಮಾಡಿದ್ದೇನೆಂದಾತ ಕೋರ್ಟ್ ಗೆ ಶರಣು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

Ad Widget ... ..

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Ad Widget

ತಾನು ಧರ್ಮಸ್ಥಳದಲ್ಲಿ ಪರಿಚಾರಕನಾಗಿ ಕೆಲಸ ಮಾಡಿಕೊಂಡಿದ್ದಾಗ ಹಲವು ಅನಾಥ ಮತ್ತು ಅತ್ಯಾಚಾರ ನಡೆಸಿದ ಹೆಣ್ಮಕ್ಕಳ‌ ಶವಗಳನ್ನು ದಫನ ಮಾಡಿದ್ದು ಇದರ ಪಾಪ ಪ್ರಜ್ಞೆ ಕಾಡುತ್ತಿದೆ ಎಂದು ಈ ಹಿಂದೆ ಈತ ಬರೆದ ಪತ್ರ ಜಾಲತಾಣಗಳಲ್ಲಿ ವೈರಲ್ ಆಗಿತ್ತು.‌ ಅದಾದ ಬಳಿಕ ಕೇಸ್ ದಾಖಲಾಗಿ ತನಿಖೆ ನಡೆಯುತ್ತಿದ್ದು, ಇದೀಗ ನ್ಯಾಯಾಲಯದಲ್ಲಿ ಹಾಜರಾಗಿದ್ದು ಪ್ರಕರಣ ಕುತೂಹಲ ಮೂಡಿಸಿದೆ.

Leave a Comment

Your email address will not be published. Required fields are marked *