ಸುರತ್ಕಲ್: MRPL ಗ್ಯಾಸ್ ಉತ್ಪಾದನಾ ಘಟಕದಲ್ಲಿ ಸೋರಿಕೆ| ಇಬ್ಬರು ಕಾರ್ಮಿಕರ ಸಾವು

ಸಮಗ್ರ ನ್ಯೂಸ್: ಸುರತ್ಕಲ್ ನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Ad Widget ... ..

ಘಟನೆಯಲ್ಲಿ ಕೇರಳ ಮೂಲದ ಓರ್ವ ಮತ್ತು ಉತ್ತರ ಪ್ರದೇಶ ಮೂಲದ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದು, ಅವರನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget

ಈ ಮೂರೂ ಕಾರ್ಮಿಕರು ಎಂಆರ್ ಪಿಎಲ್ OM‌‌‌‌&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಗಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *