ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯ ಶಾಲೆ ಹಾಗೂ ದ.ಕ ಜಿಲ್ಲೆಯ ಪಿಯುವರೆಗಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟೂಬಿಡದೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢ ಶಾಲೆಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ಗುರುವಾರ (ಜು.17) ರಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಸಿದ್ದಾರೆ.

. Ad Widget . Ad Widget . Ad Widget

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ.

. Ad Widget .

Leave a Comment

Your email address will not be published. Required fields are marked *