ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಇಂದೋರ್ ನಗರವು 2024-25ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಸತತ 8ನೇ ಬಾರಿಗೆ ದೇಶದ ‘ಅತ್ಯಂತ ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರವು ವಾರ್ಷಿಕವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್‌ ಪ್ರಥಮ, ಗುಜರಾತ್​​ನ ಸೂರತ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದ ಮುಂಬೈ ಮೂರನೇ ಸ್ಥಾನ ಪಡೆದುಕೊಂಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ, ನೋಯ್ಡಾ ಸ್ವಚ್ಛ ನಗರವಾಗಿ ಅಗ್ರಸ್ಥಾನ ಪಡೆದಿದ್ದು, ಚಂಡೀಗಢ ಎರಡನೇ ಸ್ಥಾನದಲ್ಲಿದೆ ಮತ್ತು ಮೈಸೂರು ಮೂರನೇ ಸ್ಥಾನದಲ್ಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೆಹಲಿ ವಿಜ್ಞಾನ ಭವನದಲ್ಲಿ ಜು.17ರ ಇಂದು (ಗುರುವಾರ) ನಡೆದ ಸಮಾರಂಭದಲ್ಲಿ ಅರ್ಹವಾದ ರಾಜ್ಯಗಳ ನಗರಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಆಯೋಜಿಸಿದ್ದ ಈ ಕಾರ್ಯಕ್ರಮವು, ಸ್ವಚ್ಛ ಭಾರತ ಮಿಷನ್-ನಗರ (SBM-U) ಅಡಿಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಲ್ಲಿ ಶ್ರಮಿಸಿದ ನಗರಗಳು ಮತ್ತು ನಗರ ಸಂಸ್ಥೆಗಳನ್ನು ಗೌರವಿಸಿತು.

ಇಂದೋರ್‌ ನಗರವು ಕಟ್ಟುನಿಟ್ಟಾದ ತ್ಯಾಜ್ಯ ವಿಂಗಡಣೆಯನ್ನು ಜಾರಿಗೆ ತಂದಿದೆ. ನಿವಾಸಿಗಳಲ್ಲಿ ಜಾಗೃತಿ ಮೂಡಿಸಲು ಅಭಿಯಾನ ಪ್ರಾರಂಭಿಸಿತ್ತು. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿಗಳಲ್ಲಿ ಇಂದೋರ್ ಅನ್ನು ಗೌರವಿಸಲಾಗುವುದು ಮತ್ತು ಅಗ್ರ ಸ್ಥಾನವನ್ನು ಪಡೆದುಕೊಂಡಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ ಈ ಘೋಷಣೆ ಹೊರಬಿದ್ದಿದೆ.

ಕರ್ನಾಟಕದ ಮೈಸೂರು ಪಟ್ಟಿಯ ಟಾಪ್​ 10 ರಲ್ಲಿ ಸ್ಥಾನ ಪಡೆದಿರುವ ಏಕೈಕ ನಗರವಾಗಿದೆ. 1 ಲಕ್ಷಕ್ಕೂ ಅಧಿಕ ಜನರು ವಾಸಿಸುವ ನಗರಗಳ ಪಟ್ಟಿಯಲ್ಲಿ ಅರಮನೆ ನಗರಿ 8ನೇ ಸ್ಥಾನ ಪಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, 19 ಸ್ಥಾನ ಪಡೆದುಕೊಂಡಿದೆ. 2016 ರಲ್ಲಿ ದೇಶದಲ್ಲಿಯೇ ನಂಬರ್​ 1 ಸ್ಥಾನ ಪಡೆದಿದ್ದ ಮೈಸೂರು ಬಳಿಕ ಕುಸಿತ ಕಂಡಿತ್ತು. ಅದರಲ್ಲೂ 2023 ನೇ ಸಾಲಿನಲ್ಲಿ 27 ನೇ ಸ್ಥಾನ ಪಡೆದುಕೊಂಡಿತ್ತು. ಇದು ನಗರದ ಅತ್ಯಂತ ಕಳಪೆ ಸಾಧನೆಯಾಗಿತ್ತು. ಈ ಬಾರಿ ನಗರದ ಅಂದವನ್ನು ಹೆಚ್ಚಿಸುವಲ್ಲಿ ಮಹಾನಗರಪಾಲಿಕೆಯು ಶ್ರಮ ವಹಿಸಿತ್ತು. ಉತ್ತಮ ಪ್ರದರ್ಶನ ನೀಡಿದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಛತ್ತೀಸ್​ಗಢ ಮತ್ತು ಕರ್ನಾಟಕ ನಂತರದ ಸ್ಥಾನಗಳಲ್ಲಿವೆ.

Leave a Comment

Your email address will not be published. Required fields are marked *