ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.
ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನೆಗಳು ಓಡಾಡುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ.






