ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ| ಮಂಗಳೂರು – ಬೆಂಗಳೂರು ರಸ್ತೆ ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17, 2025ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ.

Ad Widget ... ..

ಬೃಹತ್ ಪ್ರಮಾಣದ ಮಣ್ಣು ಕುಸಿದು ರಸ್ತೆಯ ಮೇಲೆ ಬಿದ್ದಿರುವುದರಿಂದ ವಾಹನ ಸಂಚಾರ ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಂಡಿದೆ.

Ad Widget

ಪ್ರಸ್ತುತ, ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯ ಆರಂಭಿಸಿದ್ದಾರೆ. ಮಣ್ಣು ತೆಗೆಯುವ ಕಾರ್ಯವು ಮಧ್ಯಾಹ್ನದವರೆಗೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *