ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ.

Ad Widget ... ..

ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ. ಶವಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಹಾಳೆಯಲ್ಲಿ ಗುರುತು ಮಾಡಿಕೊಡು ಎಂದು ಪೊಲೀಸರು ಸಾಕ್ಷಿ ಫಿರ್ಯಾದಿಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಆತ ನೀಡಿರುವ ಹೇಳಿಕೆಗಳು ಸೋರಿಕೆಯಾಗುತ್ತಿವೆ ಎಂದು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಳವಳ ವ್ಯಕ್ತಪಡಿಸಿದರು.

Ad Widget

ಸಾಕ್ಷಿ ಫಿರ್ಯಾದಿಯು ತನ್ನ ವಕೀಲರೊಂದಿಗೆ ಒಂದು ಸ್ಥಳಕ್ಕೆ ತೆರಳಿ, ಕಳೇಬರವನ್ನು ತೆಗೆಯುವುದಾಗಿ ನ್ಯಾಯಾಲಯ ಮತ್ತು ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಹೀಗಿದ್ದೂ ಪೊಲೀಸರು ಸ್ಥಳಕ್ಕೆ ತೆರಳಿಲ್ಲ. ಆತನ ಹೇಳಿಕೆ ದಾಖಲಿಸುವ ತನಿಖಾಧಿಕಾರಿಯು ಯಾರಿಗೋ ಕರೆ ಮಾಡಿ, ಅವರು ಸೂಚಿಸಿದ್ದಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೀಗಾಗಿ ತತ್‌ಕ್ಷಣವೇ ತನಿಖಾ ತಂಡವನ್ನು ಬದಲಿಸಿ, ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸಬೇಕು ಎಂದು ಒತ್ತಾಯಿಸಿದರು.‌ ವಕೀಲ ಸಿ.ಎಸ್‌.ದ್ವಾರಕಾನಾಥ್‌, ಸಾಮಾಜಿಕ ಚಿಂತಕ ಟಿ.ನರಸಿಂಹಮೂರ್ತಿ, ವಕೀಲರಾದ ಬಾಲು, ಉಮಾಪತಿ, ಸುಧಾ ಕಟ್ವಾ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *