ಸಮಗ್ರ ನ್ಯೂಸ್: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶಿಸಿದ್ದಾರೆ.
ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರು ವರೆಗೆ ಎಂದು ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶಿಸಿದ್ದಾರೆ.






