ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು?

ಸಮಗ್ರ ನ್ಯೂಸ್: ಜಗದೀಪ್‌ ಧನಕರ್‌ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಉಪ ಸಭಾಪತಿಯೂ ಆದ ಜನತಾದಳ (ಯುನೈಟೆಡ್‌) ಸಂಸದ ಹರಿವಂಶ್‌ ಅವರು 2020ರಿಂದ ಉಪ ಸಭಾಪತಿ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ವಿಶ್ವಾಸವನ್ನು ಗಳಿಸಿದ್ದಾರೆ. ಈ ಕಾರಣಕ್ಕೆ ಅವರು ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ.

‘ಮುಂದಿನ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಉತ್ತಮ ಘನತೆಯುಳ್ಳ ಹಾಗೂ ವಿವಾದಾತ್ಮಕ ವಲ್ಲದ ವ್ಯಕ್ತಿಯನ್ನು ಪಕ್ಷವು ಆಯ್ಕೆ ಮಾಡಲಿದೆಯೆಂದು ನಂಬಿದ್ದೇನೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *