ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.

Ad Widget ... ..

ಈ ಹಿನ್ನೆಲೆಯಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅವರನ್ನು ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ.

Ad Widget

ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆಗಾಗಿ ಅಗತ್ಯವಿರುವ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಅವರು ಸಲಹೆ ನೀಡಲು ಸಿದ್ಧರಾಗಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನು ತಜ್ಞರು ಉಲ್ಲೇಖಿಸಿದಂತೆ, ಸಮಾಧಿ ತೆರೆಯುವ ಕಾರ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಪತ್ತೆ ಮಾಡುವುದು, ಶವದ ಗುರುತು ಪತ್ತೆಗೆ ವೈದ್ಯಕೀಯ ಮತ್ತು ಪೋಲಿಸ್ ಅಧಿಕಾರಿಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮುಂದೆ ಬಂದಿದ್ದಾರೆ. ಎಲ್ಲರ ಸಹಕಾರದಿಂದ ಈ ತನಿಖೆಯನ್ನು ಮಾಡಿದಲ್ಲಿ ಪ್ರಕರಣವನ್ನು ಸತ್ಯದ ಹಾದಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಈ ಬೆಳವಣಿಗೆಯ ಮಧ್ಯೆ, ವಕೀಲ ಮಂಜುನಾಥ್ ಅವರು ವಿಶೇಷ ತನಿಖಾ ತಂಡ (SIT) ತನಿಖಾ ಪ್ರಕ್ರಿಯೆ ಪ್ರಾಮಾಣಿಕವಾಗಿರಲಿ ಎಂಬ ದೃಷ್ಟಿಯಿಂದ, ಈ ತಜ್ಞರ ಸಂಪರ್ಕ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *