ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜು 25) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಗುಡ್ಡಕುಸಿತ, ನೆರೆ ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.







