ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜು 25ರಂದು ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಭಾರೀ ಮಳೆ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.






