ಭಾರೀ ಮಳೆ ಹಿನ್ನಲೆ| ಇಂದು(ಜು.24) ಉಡುಪಿ ಜಿಲ್ಲೆ ಹಾಗೂ ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.

Ad Widget ... ..

ದ.ಕ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರ ಗುರುವಾರ ಮುಲ್ಕಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್‌ ಅವರು ಆದೇಶ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *