ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಕೂಗು ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಬದಲಿಸುವುದಾದರೇ ತುಳುನಾಡು ಅಂತಾ ಬದಲಿಸಲಿ ಎಂದು ಹೇಳಿದ್ದಾರೆ.

Ad Widget ... ..

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಜಿಲ್ಲೆಯನ್ನು ಮಾಡುವುದಾದರೆ ಯಾವ ಹೆಸರು ಬೇಕಾದರೂ ಇಟ್ಟುಕೊಳ್ಳಲಿ. ಆದರೆ ಐತಿಹಾಸಿಕ ಸ್ಥಳಗಳ ಹೆಸರನ್ನು ಯಾರು ಕೂಡ ಬದಲಿಸಬಾರದು. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ ಕಾಸರಗೋಡು ಬೇರೆಯಾಗಿರುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Ad Widget

ಜಿಲ್ಲಾ ಕೇಂದ್ರವಾದ ಮಂಗಳೂರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬ್ಯಾಂಕಿಂಗ್, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಉದ್ಯಮದ ಕೇಂದ್ರವಾಗಿ ಬಲವಾದ ಬ್ರಾಂಡ್ ಮನ್ನಣೆಯನ್ನು ಹೊಂದಿದೆ. ಹೀಗಾಗಿ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಮರುನಾಮಕರಣ ಮಾಡಬೇಕು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಜೋರಾಗಿ ನಡೆಯುತ್ತಿದೆ.

Leave a Comment

Your email address will not be published. Required fields are marked *