July 2025

ರಾಜ್ಯಾದ್ಯಂತ ಜು.16ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿದ್ದರೂ, ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ, ಕೆಲವು ಸ್ಥಳಗಳಲ್ಲಿ ತುಂತುರು […]

ರಾಜ್ಯಾದ್ಯಂತ ಜು.16ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಎನ್ಐಎ ನಿಂದ ರಾಜ್ಯದಲ್ಲಿ ದಿಢೀರ್ ದಾಳಿ| ಮೂವರು ಶಂಕಿತ ಉಗ್ರರು ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ದಳ(ಎನ್​ಐಎ) ರಾಜ್ಯದಲ್ಲಿ ದಿಢೀರ್ ಬೇಟೆಯಾಡಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಹಾಗೂ ಅನೀಸ್‌ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್​ಐಎ

ಎನ್ಐಎ ನಿಂದ ರಾಜ್ಯದಲ್ಲಿ ದಿಢೀರ್ ದಾಳಿ| ಮೂವರು ಶಂಕಿತ ಉಗ್ರರು ವಶಕ್ಕೆ Read More »

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ?

ಸಮಗ್ರ ನ್ಯೂಸ್: ದೇಶದಾದ್ಯಂತ ‘ಭಾರತ್ ಬಂದ್’ ಜಾರಿಯಾಗಲಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಈ ಮುಷ್ಕರಕ್ಕೆ ಕರೆ ನೀಡಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸುವ ಈ ಪ್ರತಿಭಟನೆ, ಕೇಂದ್ರ ಸರ್ಕಾರದ ‘ಕಾರ್ಮಿಕ-ರೈತ ವಿರೋಧಿ’ ನೀತಿಗಳ ವಿರುದ್ಧ ನಡೆಸಲಾಗುತ್ತಿದೆ.  ಬಂದ್‌ನಿಂದ ಬ್ಯಾಂಕಿಂಗ್, ಸಾರಿಗೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ಸಾಧ್ಯತೆಯಿದೆ. ಈ ಮುಷ್ಕರದಿಂದಾಗಿ ಬ್ಯಾಂಕ್‌ಗಳು ಮುಚ್ಚಲ್ಪಡಬಹುದು, ಚೆಕ್ ಕ್ಲಿಯರೆನ್ಸ್, ಗ್ರಾಹಕ ಸೇವೆಗಳು, ಮತ್ತು ಇತರ ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಅಂಚೆ ಕಚೇರಿಗಳು, ಕಲ್ಲಿದ್ದಲು ಗಣಿಗಾರಿಕೆ

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ? Read More »

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಸೋಮವಾರ(ಜು.೭) ಮಧ್ಯಾಹ್ನ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ವರದಿಯ ಪ್ರಕಾರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನ ಮಾಡಲು ಹೋಗುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅಸ್ಗರ್ ಅಲಿಯ ನಾಲ್ವರು ಮಕ್ಕಳಲ್ಲಿ ಅಫ್ತಾಬ್

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ Read More »

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಮುಂದುವರಿದಿದ್ದು ನಿನ್ನೆ ಜು.7ರಂದು ಬರೋಬ್ಬರಿ 11 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರಿನಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಯಂತ್‌ಗೆ ಮನೆಯಲ್ಲಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಶ್ರೀಧರ್ ಟೀ ಕುಡಿದು ಮನೆಯಲ್ಲಿ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕು

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ಭಾವಿಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ಇಂದು(ಜೂ.7) ನಡೆದಿದೆ. ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಲ್ಲೆಗೊಳಗಾದ ಯುವತಿಯಾಗಿದ್ದು, ಕೋಡ್ಮನ್ ಗ್ರಾಮದ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿವ್ಯಾ ಮತ್ತು ಸುಧೀರ್ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿನ ಕೆಲವು ತಿಂಗಳುಗಳಿಂದ ಇಬ್ಬರ ನಡುವೆ ಮನಸ್ತಾಪ

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ Read More »

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಪ್ರಿಯಸಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂದು ಆತನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಎಲ್ಲಾ ಆರೋಪಿಗಳನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದು, ಇನ್ನು 17 ವರ್ಷದ ಬಾಲಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 17 ವರ್ಷದ ಬಾಲಕಿಯನ್ನು ಅರೆಸ್ಟ್ ಮಾಡಿದ್ದಾರೆ.

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್ Read More »

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜುಲೈ 7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ Read More »

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪುರುಷೋತ್ತಮ (43) ಹಾಗೂ ರಾಮಚಂದ್ರ (38) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರು. ಘಟನೆಯ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್ Read More »