July 2025

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ

ಸಮಗ್ರ ನ್ಯೂಸ್‌: ಪವಿತ್ರ ಆಣಿವಾರ ಆಸ್ಥಾನಂ ಪರ್ವದಿನದ ಹಿನ್ನೆಲೆಯಲ್ಲಿ ಜುಲೈ 14 ಮತ್ತು 15ರಂದು ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಮುಖ ಬದಲಾವಣೆಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟಿಸಿದೆ. ಈ ಎರಡು ದಿನಗಳಲ್ಲಿ ಸಾಮಾನ್ಯ ಭಕ್ತರಿಗೆ ನಿರ್ದಿಷ್ಟವಾದ VIP ಬ್ರೇಕ್ ದರ್ಶನವನ್ನು ರದ್ದುಗೊಳಿಸಲಾಗಿದ್ದು, ಪ್ರೋಟೋಕಾಲ್ ಗಣ್ಯರನ್ನು ಹೊರತುಪಡಿಸಿ ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ. ಜುಲೈ 15ರಂದು ದೇವಸ್ಥಾನದಲ್ಲಿ ನಡೆಯಲಿರುವ ಕೋಯಿಲ್ ಆಳ್ವಾರ್ ತಿರುಮಂಜನಂ ಎಂಬ ವಿಶೇಷ ಶುದ್ದೀಕರಣ ಕ್ರಮಕ್ಕೆ ಪೂರ್ವಭಾವಿಯಾಗಿ ಈ […]

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ Read More »

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌

ಸಮಗ್ರ ನ್ಯೂಸ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ. ಮೆಟ್ರೋ ಪ್ರಯಾಣಿಕರು ಸುಲಭವಾಗಿ ಟಿಕೆಟ್‌ ಖರೀದಿಸಲು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿ ಒಟ್ಟು ಐದು ಆ್ಯಪ್​​ಗಳ ಮೂಲಕ ಖರೀದಿಸಬಹುದಾಗಿದೆ. ಈ ಆ್ಯಪ್​ಗಳು ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌ Read More »

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ

ಸಮಗ್ರ ನ್ಯೂಸ್‌: ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿದೆ. ಕನ್ನಡವನ್ನು ಬದಿಗಿಡಲಾಗುತ್ತಿರುವ ಈ ಉಪಕ್ರಮವನ್ನು ಕೆಡಿಎ ಒಪ್ಪುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಕನ್ನಡವನ್ನು ಬದಿಗಿಡುವುದು

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ ತಿಂಗಳ ಎರಡನೇ ವಾರ 06-೦7-2025ರಿಂದ 22-07-2025ರವರೆಗೆ ಇರಲಿದೆ. ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಲಾಭ? ಎಂದು ತಿಳಿಯೋಣ ಬನ್ನಿ… ಮೇಷ ರಾಶಿ:ಜುಲೈ ತಿಂಗಳ ಎರಡನೇ ವಾರದಲ್ಲಿ ನಿಮಗೆ ಶುಭ. ರಾಶಿಯ ಅಧಿಪತಿ ಮಿತ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಆದರೆ ನಿಮ್ಮದಲ್ಲದ ವಿಚಾರದಲ್ಲಿ ಸಲಹೆಯನ್ನು ಕೊಡಲು ಹೋಗುವುದು ಬೇಡ. ಯಾರದೋ ಅಸೆಗೆ ನೀವು ಬಲಿಯಾಗುವಿರಿ. ಕೊನೆಗೆ ನಿಮ್ಮ ನಡುವಲ್ಲಿ ಬಿಟ್ಟು ಆನಂದಿಸುವರು. ಗೃಹ ನಿರ್ಮಾಣ ಕಾರ್ಯದಲ್ಲಿ ಅತಿಯಾದ ಗಡಿಬಿಡಿ ಬೇಡ. ಒಂದೊಂದೇ ಮೆಟ್ಟಿಲೇರಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. ಆ ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಆ ಅಶ್ಲೀಲ

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!! Read More »

ಪುತ್ತೂರು: ಮದುವೆಯಾಗುವುದಾಗಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ| ಆರೋಪಿ ಕೃಷ್ಣ ಜೆ ರಾವ್ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿದ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದು ಆತನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಾಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ

ಪುತ್ತೂರು: ಮದುವೆಯಾಗುವುದಾಗಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ| ಆರೋಪಿ ಕೃಷ್ಣ ಜೆ ರಾವ್ ಅರೆಸ್ಟ್ Read More »

ಮೃತದೇಹ ಹೂತು ಹಾಕಿರುವ ಕುರಿತು ಅನಾಮಧೇಯ ಪತ್ರ| ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಅಪರಾಧ ಕೃತ್ಯಗಳ ಮೃತದೇಹಗಳನ್ನು ವಿಲೇವಾರಿ ಮಾಡಿರುವ ಮಾಹಿತಿ ಕುರಿತಂತೆ ಬಂದ ಅನಾಮಧೇಯ ಪತ್ರಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ

ಮೃತದೇಹ ಹೂತು ಹಾಕಿರುವ ಕುರಿತು ಅನಾಮಧೇಯ ಪತ್ರ| ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು Read More »

ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ

ಸಮಗ್ರ ನ್ಯೂಸ್: ಕೇರಳದಲ್ಲಿ ಮಳೆಯ ಅಬ್ಬರ ಉಂಟಾಗಿದೆ. ಕಾಸರಗೋಡು ಸಹಿತ ಉತ್ತರ ಕೇರಳದ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದೆ.ಶನಿವಾರ ಎರ್ನಾಕುಳಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುಪರ, ಕೋಝಿಕ್ಕೋಡ್‌, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಯ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್‌, ಪಾಲಕ್ಕಾಡ್‌ ಮತ್ತು ಮಲಪ್ಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆ ಮತ್ತು ಗಂಟೆಗೆ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇತರ ಜಿಲ್ಲೆಗಳಲ್ಲಿಪ್ರತ್ಯೇಕ

ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳಿಗೆ ಆಶ್ರಯ ನೀಡಿದ್ದಾತ ಕೊಡಗಿನ ವ್ಯಕ್ತಿ ಕೇರಳದಲ್ಲಿ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ ಐ ಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳಿಗೆ ಆಶ್ರಯ ನೀಡಿದ್ದಾತ ಕೊಡಗಿನ ವ್ಯಕ್ತಿ ಕೇರಳದಲ್ಲಿ ಎನ್ಐಎ ವಶಕ್ಕೆ Read More »

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

ಸಮಗ್ರ ನ್ಯೂಸ್: ಕಳೆದ ಕೆಲ ವಾರಗಳಿಂದ ಹೃದಯಾಘಾತದ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಿದ್ದು, ಶುಕ್ರವಾರವೂ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದ 21 ವರ್ಷದ ಯುವಕ ಮದನ್, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದನು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳ ಗ್ರಾಮದ ಭಾವನ ಮನೆಗೆ ಬಂದಿದ್ದ ಮದನ್, ನಿನ್ನೆ ರಾತ್ರಿ ದಿಢೀರ್ ಎದೆನೋವಿನಿಂದ ಬಳಲಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »