ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ

ಸಮಗ್ರ ನ್ಯೂಸ್: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ಮಹತ್ವದ ತೀರ್ಪು ನೀಡಿದ್ದಾರೆ.

Ad Widget ... ..

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ ಎಂದರು.

Ad Widget

ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ ಕೆಲಸದ ಮಹಿಳೆ ಆಕೆಯ ಮೇಲೆ ಅಧಿಕಾರಯುತ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿರುವಂತಹ ಅಪರಾಧ ಸಾಬೀತಾಗಿದೆ. ದುರಾದೃಷ್ಟವಶಾತ್ ಆಕೆಗೆ ಯಾವುದೇ ಸ್ಥಾನಮಾನವಿಲ್ಲ ವಿಡಿಯೋ ನೋಡಿದರೆ ಕೃತ್ಯದ ತೀವ್ರತೆ ಸ್ಪಷ್ಟವಾಗಿದೆ 10 ಸಾವಿರ ಸಂಬಳಕ್ಕೆ ಇವರು ಕೆಲಸ ಮಾಡುತ್ತಿದ್ದರು ಎಂದು ಬಿಎನ್ ಜಗದೀಶ್ ವಾದಿಸಿದರು.

ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ್ದಾರೆ.ಹೀಗಾಗಿ ಮಹಿಳೆ ಕೆಲಸ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿತ್ತು.ತನ್ನ ಬಟ್ಟೆಗಳನ್ನು ಬಿಟ್ಟು ಮನೆಗೆ ಓಡುವಂತಾಯಿತು. ಅಪರಾಧಿಯ ಕೈಯಲ್ಲಿ ಆಕೆ ಸುಲಭದ ಬಲಿಯಾಗಿದ್ದಳು ಅತ್ಯಾಚಾರಕ್ಕೆ ದೇಹದ ಮೇಲಲ್ಲ ಮನಸ್ಸಿನ ಮೇಲು ಆಗಿದೆ. ವಿಡಿಯೋ ನೋಡಿದ ಬಳಿಕ ಆಕೆ ಆತ್ಮಹತ್ಯೆಗೆ ನಿರ್ಧರಿಸಿದ್ದಳು ಜೀವಕ್ಕಿಂತ ಹೆಚ್ಚಿನ ಹಾನಿ ಸಂತ್ರಸ್ತ ಮಹಿಳೆಗೆ ಆಗಿದೆ ಎಂದು ಬಿಎನ್ ಜಗದೀಶ್ ವಾದಿಸಿದರು.

ಒಪ್ಪಿಗೆ ಇಲ್ಲದೆ ಲೈಂಗಿಕ ಕ್ರಿಯೆಯ ಚಿತ್ರೀಕರಣ ಮಾಡಲಾಗಿದೆ. ಆಕೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರದ ರೀತಿ ಆತನ ವಕ್ರ ಮನಸ್ಥಿತಿ ತೋರಿಸುತ್ತದೆ. ಪ್ರಜ್ವಲ್ ಸಂಸದನಾಗಿದ್ದು ಇಂತಹ ದುಷ್ಕೃತ್ಯ ಎಸಗಿದ್ದಾನೆ. ಕಾನೂನು ತಿಳಿದಿದ್ದರೂ ಕೂಡ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಈತನ ಮೇಲೆ ಈ ರೀತಿಯ ಇನ್ನಷ್ಟು ಕೆಎಸ್ ಗಳಿವೆ. ಬಹಳಷ್ಟು ಜನರ ಅಶ್ಲೀಲ ವಿಡಿಯೋ ಮಾಡಿದ್ದಾನೆ. ವಿಡಿಯೋ ಚಿತ್ರೀಕರಿಸಿದ್ದು ಗಂಭೀರವಾದ ಅಪರಾಧವಾಗಿದೆ. ಪ್ರಜ್ವಲ್ ಗೆ ಗರಿಷ್ಠ ಶಿಕ್ಷೆ ವಿಧಿಸಿ. ಇದು ಇತರರಿಗೂ ಎಚ್ಚರಿಕೆಯಾಗಬೇಕು ಎಂದು ವಾದಿಸಿದರು.

Leave a Comment

Your email address will not be published. Required fields are marked *