ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget .

ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ದಾಳಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ 10 ಕಡೆ ಹಾಗೂ ಸುರತ್ಕಲ್ ನ 4 ಕಡೆ ದಾಳಿ ನಡೆಸಲಾಗಿದೆ. ಘಟನೆ ನಡೆದ ಸಂದರ್ಭ ಮೊಬೈಲ್‌ನಲ್ಲಿ ಚಿತ್ರೀಕರಣ ನಡೆಸಿದ ಕಿನ್ನಿಪದವುನಲ್ಲಿರುವ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.

Ad Widget . Ad Widget .

ಇದೇ ವೇಳೆ, ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ತಮ್ಮ ಸುಪರ್ದಿಗೆ ಪಡೆದು ಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ 2 ಕಡೆ ದಾಳಿ ನಡೆದಿದೆ. ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು 2 ಆರೋಪಿಗಳ ಮನೆಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ಹಾಸನದಲ್ಲಿಯೂ 2 ಕಡೆ ದಾಳಿ ನಡೆದಿದ್ದಾಗಿ ವರದಿಯಾಗಿದೆ.

Leave a Comment

Your email address will not be published. Required fields are marked *