ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟನೆ ಮಾಡಲಿದ್ದಾರೆ.

. Ad Widget . Ad Widget . Ad Widget .

ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ಅಂದಾಜಿಸಿದೆ.

ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖಿ ವೃತ್ತದ ಬಳಿಯ ಲಿಮಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ನಂತರ ಮೋದಿ ಅವರು ಬೆಳಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ಆರ್.ವಿ.ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11.45ಕ್ಕೆ ಆರ್.ವಿ.ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಆರ್.ವಿ.ರಸ್ತೆಯ (ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆವ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Comment

Your email address will not be published. Required fields are marked *