ಚಿಕ್ಕಮಗಳೂರು: ಹೃದಯಾಘಾತಗೊಂಡು ಕುಸಿದು ಬಿದ್ದು 15ರ ಬಾಲಕ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ 15 ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *