ಸಮಗ್ರ ನ್ಯೂಸ್: ಆಗಸ್ಟ್ 6 ರಂದು ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ನಲ್ಲಿ ನಡೆದ ಗಲಾಟೆ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅವರಿಗೆ ನ್ಯಾಯಾಲಯ ಮದ್ಯಂತರ ಜಾಮೀನು ನೀಡಿದೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7.15ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಧರ್ಮಸ್ಥಳದ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣದಡಿ ಆ. 6ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ. 9ರಂದು 6 ಮಂದಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಾಂತರ ಜಾಮೀನು ಮಂಜೂರಾಗಿದೆ.. ಆ. 11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದೆ.







