ಗಣೇಶ ಚತುರ್ಥಿ, ಈದ್ ಮಿಲಾದ್ ಗೆ ಡಿಜೆ ನಿಷೇಧ| ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

Ad Widget ... ..

ಎರಡು ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಿ: 27-08-2025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

Ad Widget

ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ರಾಜ್ಯದ ಹಲವೆಡೆ ದಿ:05-09-2025 ರಿಂದ 10-09-2025 ರವರೆಗೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ಹಾಗೂ ಹಬ್ಬವನ್ನು ಆಚರಿಸಲಿದ್ದಾರೆ ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *