ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ಕುರಿತಾದ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಘಟಕ ಮತ್ತು ವಿದ್ಯಾರ್ಥಿ ಪರಿಷತ್ತು ವತಿಯಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ನಾರಾಯಣ ನಾಯಕ್, ನಿವೃತ್ತ ಮುಖ್ಯೋಪಾಧ್ಯಾಯರು ಬಂಟ್ವಾಳ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ದೊರಕುವ ವಿವಿಧ ಇಲಾಖೆ ಮತ್ತು ಸಂಸ್ಥೆಗಳಿಂದ ದೊರಕುವ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ ಮನೋಹರ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವಪ್ರಸಾದ್ ಎಸ್ ವಂದಿಸಿದರು.







