ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.
ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.
ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಸದಸ್ಯ ಪೀಠ ವಾದ ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.
ಕಳೆದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಸಲ್ಲಿಸಿದ ದಾಖಲೆ ಪರಿಶೀಲಿಸಲಾಗಿದೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಕಾಣುತ್ತಿದೆ. ಜಾಮೀನು ನೀಡಲು ಒಂದು ಸಣ್ಣ ಅಂಶ ಸಿಕ್ಕರೆ ಸಾಕು ಎನ್ನುವಂತೆ ನಮಗೆ ಅನ್ನಿಸುತ್ತಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ನ್ಯಾಯಮೂರ್ತಿ ಪರ್ದಿವಾಲಾ ಅಭಿಪ್ರಾಯಪಟ್ಟಿದ್ದರು.






