ಸಮಗ್ರ ನ್ಯೂಸ್: ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆ.17ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರುಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆ.18ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಹಗುರದಿಂದ ಮಧ್ಯಮ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.







