ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ‌ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಭಾರತ ಪುರುಷರ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡದ ನಾಯಕ ಶುಭ್ ಮನ್ ಗಿಲ್ ಕುರಿತು ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

Ad Widget ... ..

ತಂಡದ ಆಯ್ಕೆ ಸಭೆಯಲ್ಲಿ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಟಿ20ಐ ನಾಯಕ ಸೂರ್ಯಕುಮಾರ್ ಯಾದವ್, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉಪಸ್ಥಿತರಿದ್ದರು. ಬಿಸಿಸಿಐ ಆಯ್ಕೆದಾರರೊಂದಿಗೆ ನಡೆಸಿದ ಸಭೆಯ ನಂತರ ತಂಡವನ್ನು ಘೋಷಿಸಲಾಗಿದೆ.

Ad Widget

ಶುಭಮನ್ ಗಿಲ್ ಅವರನ್ನು ತಂಡದ ಉಪನಾಯಕರನ್ನಾಗಿ ಹೆಸರಿಸಲಾಗಿದೆ. ಇನ್ನು ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಚ್ಚರಿ ಆಯ್ಕೆ ಎಂಬಂತೆ ವೇಗಿ ಜಸ್ಪ್ರೀತ್ ಬುಮ್ರಾ ರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೆಲ ಪಂದ್ಯಗಳಿಂದ ದೂರ ಉಳಿದಿದ್ದ ಬುಮ್ರಾ ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗುವುದು ಅನಿಶ್ಚಿತತೆಯಲ್ಲಿತ್ತು. ಆದರೆ ಬುಮ್ರಾರನ್ನು ಆಯ್ಕೆಸಮಿತಿ ತಂಡಕ್ಕೆ ಸೇರ್ಪಡೆ ಮಾಡಿದೆ.

ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ಸಿಂಗ್ ರಾಣಾ.

ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.

Leave a Comment

Your email address will not be published. Required fields are marked *