ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್ಐಟಿಗೆ ಹಸ್ತಾಂತರ

ಸಮಗ್ರ ನ್ಯೂಸ್: ಅನನ್ಯ ಭಟ್ ಸುಜಾತ್ ಭಟ್ ಅವರ ಮಗಳೇ ಅಲ್ಲ ಎಂದು ಮಾಧ್ಯಮಗಳಲ್ಲಿ ತನಿಖಾ ವರದಿಗಳು ಬರುತ್ತಿರುವುದರ ಬೆನ್ನಲ್ಲೇ ಇದೀಗ ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಗೆ ವಹಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

. Ad Widget . Ad Widget . Ad Widget .

ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ಬೆನ್ನಲ್ಲಿಯೇ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಆಕೆಯ ತಾಯಿ ಸುಜಾತಾ ಭಟ್ ಜುಲೈ 15ರಂದು ಧರ್ಮಸ್ಥಳ‌ ಠಾಣೆಗೆ ದೂರು ನೀಡಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಧರ್ಮಸ್ಥಳ ಪೊಲೀಸರು ನಂ. 175/PTN/DPS/2025 ರಂತೆ ದೂರರ್ಜಿಯನ್ನು ಸ್ವೀಕರಿಸಿದ್ದರು. ಈ ದೂರರ್ಜಿಯನ್ನು ಡಿಜಿ ಹಾಗೂ ಐಜಿಪಿಯವರು ಆ.19 ರಂದು ನೀಡಿದ ಆದೇಶದಂತೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *