ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ| ಆ.23ಕ್ಕೆ ಜಾಮೀನು ಅರ್ಜಿ ವಿಚಾರಣೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಇದೀಗ ಅವರ ಜಾಮೀನು ಅರ್ಜಿಯನ್ನು ಅ. 23ಕ್ಕೆ ನಿಗದಿ ಪಡಿಸಿದೆ.

Ad Widget ... ..

ಫೇಸ್ಟುಕ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡ ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BNS 196(1),352,353(2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಹಾಗೆಯೇ ತಿಮರೋಡಿ ಅವರಿಗೆ ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.

Ad Widget

ನೋಟಿಸ್‌ ಜಾರಿಮಾಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಲ್ಲಿ ಆ.21 ರಂದು ವಶಕ್ಕೆ ಪಡೆಯಲಾಗಿತ್ತು. ಬಳಿಕ ಅವರು ತಿಮರೋಡಿಯಿಂದ ಬ್ರಹ್ಮಾವರಕ್ಕೆ ತನ್ನ ಸಂಗಡಿಗರೊಂದಿಗೆ ಖಾಸಗಿ ವಾಹನದಲ್ಲಿ ತೆರಳಿದ್ದರು. ಅಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ತಿಮರೋಡಿಯವರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಬಂಧಿಸಿದ್ದಾರೆ. ಬಳಿಕ ಅವರನ್ನು ಬ್ರಹ್ಮಾವರ ಸಂಚಾರಿ ಪೀಠಧ ಮುಂದೆ ಹಾಜರು ಪಡಿಸಲಾಗಿದ್ದು ಅಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Comment

Your email address will not be published. Required fields are marked *