ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.‌28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget

ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *