ಜನೌಷಧಿ‌ ಕೇಂದ್ರ ಮಾದರಿಯಲ್ಲಿ ಕೀಟನಾಶಕ ಕೇಂದ್ರ – ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆಯೋ ಅದೇ ರೀತಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್‌ ಸೆಂಟರ್‌) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.

Ad Widget ... ..

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ ರೀತಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

Ad Widget

ಮಂಡ್ಯ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಸಮಸ್ಯೆಯ ತೀವ್ರತೆ ತಿಳಿದುಕೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸುತ್ತಿದ್ದು ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

Leave a Comment

Your email address will not be published. Required fields are marked *