August 2025

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

ಸಮಗ್ರ ನ್ಯೂಸ್: ದಿಢೀರ್ ಬೆಳವಣಿಗೆ ಎನ್ನುವಂತೆ ಸಚಿವ ಸ್ಥಾನಕ್ಕೆ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕ್ಯಾತಸಂದ್ರ […]

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ Read More »

ಚಾರ್ಮಾಡಿ ಘಾಟಿಯಲ್ಲಿ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಆ.10 ರಂದು KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಘಾಟಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರುಬೇಟಿನೀಡಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಘಾಟಿಯಲ್ಲಿ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ Read More »

ಧರ್ಮಸ್ಥಳ: ಪದ್ಮಲತಾ ಕೊಲೆ‌ ಪ್ರಕರಣ| ಮರು ತನಿಖೆಗೆ ಒತ್ತಾಯಿಸಿ ಸಹೋದರಿಯಿಂದ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ. ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ?“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ

ಧರ್ಮಸ್ಥಳ: ಪದ್ಮಲತಾ ಕೊಲೆ‌ ಪ್ರಕರಣ| ಮರು ತನಿಖೆಗೆ ಒತ್ತಾಯಿಸಿ ಸಹೋದರಿಯಿಂದ ಎಸ್ಐಟಿ ಗೆ ದೂರು Read More »

ಹಳದಿ ಮಾರ್ಗದ ಮೆಟ್ರೋ ಸಂಚಾರ ಆ.11 ರಿಂದ ಆರಂಭ |ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಬೆಂಗಳೂರಿನ ಆರ್ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯು ಇಂದಿನಿಂದ (ಆ.11 )ಬೆಳಿಗ್ಗೆಯಿಂದ ಪ್ರಾರಂಭವಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. ಇಂದು ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭವಾಗಿದ್ದು. ಹಳದಿ ಮಾರ್ಗದಲ್ಲಿನ ನಮ್ಮ ಮೆಟ್ರೋ ರೈಲು ಸಂಚಾರದ ವೇಳಾಪಟ್ಟಿ ಈ ಕೆಳಗಿನಂತಿದೆ. ಸೋಮವಾರದಿಂದ ಶನಿವಾರದವರೆಗೆ, ವಾರದ ಎಲ್ಲಾ ದಿನಗಳಲ್ಲಿ, ಆರ್.ವಿ. ರಸ್ತೆ ಮತ್ತು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಿಗ್ಗೆ 6.30

ಹಳದಿ ಮಾರ್ಗದ ಮೆಟ್ರೋ ಸಂಚಾರ ಆ.11 ರಿಂದ ಆರಂಭ |ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ Read More »

ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್,

ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್ Read More »

ಧರ್ಮಸ್ಥಳ: ಪಾಂಗಾಳ ಕ್ರಾಸ್ ನಲ್ಲಿ‌ ಗಲಾಟೆ ಮಾಡಿ‌ ಅರೆಸ್ಟ್ ಆದ 6 ಮಂದಿಗೆ ಜಾಮೀನು

ಸಮಗ್ರ ನ್ಯೂಸ್: ಆಗಸ್ಟ್ 6 ರಂದು ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ನಡೆದ ಗಲಾಟೆ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅವರಿಗೆ ನ್ಯಾಯಾಲಯ ಮದ್ಯಂತರ ಜಾಮೀನು ನೀಡಿದೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7.15ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ 6 ಮಂದಿಯನ್ನು

ಧರ್ಮಸ್ಥಳ: ಪಾಂಗಾಳ ಕ್ರಾಸ್ ನಲ್ಲಿ‌ ಗಲಾಟೆ ಮಾಡಿ‌ ಅರೆಸ್ಟ್ ಆದ 6 ಮಂದಿಗೆ ಜಾಮೀನು Read More »

ಸಹಕಾರ ಸಂಘಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ನಿಗದಿ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುವ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಜಾರಿಗೆ ತರಲು ಮಸೂದೆ ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ರಾಜಣ್ಣ 75ನೇ ಜನ್ಮದಿನಾಚರಣೆ ಅಂಗವಾಗಿ ಹೊರ ತರಲಾಗಿದ್ದ ‘ಸಹಕಾರ ಸಾರ್ವಭೌಮ’ ಕೃತಿಗೆ ಬರಹಗಳನ್ನು ನೀಡಿದ ಲೇಖಕರಿಗೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ

ಸಹಕಾರ ಸಂಘಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ನಿಗದಿ – ಸಚಿವ ಕೆ.ಎನ್ ರಾಜಣ್ಣ Read More »

ಚಿಕ್ಕಮಗಳೂರು: ಹೃದಯಾಘಾತಗೊಂಡು ಕುಸಿದು ಬಿದ್ದು 15ರ ಬಾಲಕ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ 15 ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಹೃದಯಾಘಾತಗೊಂಡು ಕುಸಿದು ಬಿದ್ದು 15ರ ಬಾಲಕ ಸಾವು Read More »

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟನೆ ಮಾಡಲಿದ್ದಾರೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ Read More »

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ

ಸಮಗ್ರ ನ್ಯೂಸ್: ರೌಂಡ್-ಟ್ರಿಪ್ ಪ್ಯಾಕೇಜ್ ಯೋಜನೆಯ ಅಡಿಯಲ್ಲಿ ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುಲು ನಿರ್ಧರಿಸಿದೆ. ಈ ಒಂದು ಯೋಜನೆಯಡಿಯಲ್ಲಿ ಒಂದೇ ಗುಂಪಿನ ಪ್ರಯಾಣಿಕರಿಗೆ ಮುಂದಿನ ಪ್ರಯಾಣ ಮತ್ತು ಹಿಂದಿರುಗುವ ಪ್ರಯಾಣ ಎರಡಕ್ಕೂ ಟಿಕೆಟ್‌ಗಳನ್ನು ಬುಕ್ ಮಾಡಿದಾಗ ರಿಯಾಯಿತಿಗಳು ಅನ್ವಯವಾಗುತ್ತವೆ ಅಲ್ಲದೆ ಬುಕ್ ಮಾಡಿದ ಟಿಕೆಟ್‌ಗಳಿಗೆ ಯಾವುದೇ ಮರುಪಾವತಿ ಇರುವುದಿಲ್ಲ. ಈ ಯೋಜನೆಯಡಿಯಲ್ಲಿ ಬುಕಿಂಗ್‌ಗಳು ಈ ತಿಂಗಳ 14 ರಿಂದ ಅಕ್ಟೋಬರ್ 13 ರ ಮುಂಗಡ ಕಾಯ್ದಿರಿಸುವ ಅವಧಿಗೆ ಪ್ರಾರಂಭವಾಗುತ್ತವೆ. ಇದಲ್ಲದೆ, ರಿಟರ್ನ್

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ Read More »