August 2025

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ

ಸಮಗ್ರ ನ್ಯೂಸ್: ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ಗ್ರಾಹಕ ವಿಭಾಗಗಳಿಗೆ ಮಾಸಿಕ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಹೆಚ್ಚಿಸಿದೆ. ಆಗಸ್ಟ್ 1 ರಂದು ಅಥವಾ ನಂತರ ತಮ್ಮ ಉಳಿತಾಯ ಖಾತೆಗಳನ್ನು ತೆರೆದ ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿನ ಗ್ರಾಹಕರು ದಂಡವನ್ನು ತಪ್ಪಿಸಲು 50,000 ರೂ. ಮಾಸಿಕ ಸರಾಸರಿ ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಬ್ಯಾಂಕಿನ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಅಧಿಸೂಚನೆ ತಿಳಿಸಿದೆ. ಹಳೆಯ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್ […]

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ Read More »

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ 

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ, ಎಚ್ ಆರ್ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ, ಮ್ಯಾಜಿಕ್ ಬಸ್ ಇಂಡಿಯ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಇವರ ಆಶ್ರಯದಲ್ಲಿ Employability Excellence :Career Ace ತರಬೇತಿ ಕಾರ್ಯಕ್ರಮವು 4.08.2025 ರಿಂದ 9.8.2025 ರವರೆಗೆ ನಡೆಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ   ಪಿ.ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ಪ್ರೀತಮ್ ಪ್ರಸಾದ್ ಎಸ್. ಪ್ಲೇಸ್ಮೆಂಟ್ ಆಫೀಸರ್, ರಿಲಯನ್ಸ್ ಫೌಂಡೇಶನ್ ಬೆಂಗಳೂರು ಹಾಗೂ ಅಜಯ್ ಕುಮಾರ್ ಎ. ಜೆ.

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ  Read More »

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೆಕೆಂದು ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಯಾವುದೇ ರೀತಿಯ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ ಹೊಸದಾಗಿ ಧರ್ಮಸ್ಥಳದ ಅರ್ಜಿಯನ್ನು ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿಯ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಧರ್ಮಸ್ಥಳ ಸಮಾಧಿ ಪ್ರಕರಣಗಳಿಗೆ

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ Read More »

ಧರ್ಮಸ್ಥಳ: ದೂರುದಾರ ತೋರಿಸಿದಲ್ಲೆಲ್ಲಾ‌ ಅಸ್ಥಿಪಂಜರ ಶೋಧ| ಒಂದು ವಾರ ಮುಂದುವರಿಯಲಿದೆ ಹುಡುಕಾಟ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್‌ಐಟಿ ಚಿಂತನೆ ನಡೆಸಿದೆ. ಈಗಾಗಲೇ ಗುರುತಿಸಲಾದ 15 ಪಾಯಿಂಟ್ ಗಳು ಮಾತ್ರವಲ್ಲದೆ, ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿಯೂ ಶೋಧಕಾರ್ಯ ನಡೆಸಲು ಎಸ್‌ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. 15 ಮಾತ್ರವಲ್ಲ, ಮತ್ತಷ್ಟು ಸ್ಥಳಗಳಲ್ಲೂ ಎಸ್‌ಐಟಿ ಹುಡುಕಾಟ ನಡೆಸಲಿದೆ. ಅಲ್ಲದೆ 13ನೇ ಪಾಯಿಂಟ್ ನಲ್ಲಿ ಶೋಧಕ್ಕೆ ಜಿಪಿಆರ್ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಪಿಆರ್ ಯಂತ್ರ ಬಂದ ನಂತರ 13ನೇ ಪಾಯಿಂಟ್

ಧರ್ಮಸ್ಥಳ: ದೂರುದಾರ ತೋರಿಸಿದಲ್ಲೆಲ್ಲಾ‌ ಅಸ್ಥಿಪಂಜರ ಶೋಧ| ಒಂದು ವಾರ ಮುಂದುವರಿಯಲಿದೆ ಹುಡುಕಾಟ Read More »

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..!

ಸಮಗ್ರ ನ್ಯೂಸ್: ರಕ್ಷೆ ಸ್ನೇಹದ ಸಂಕೇತ, ಸಹಕಾರದ ಸಂಕೇತ, ಸ್ವಾಭಿಮಾನದ ಸಂಕೇತ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಕೈಗೆ ರಕ್ಷೆಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ಸಂಕೇತವಾಗಿದೆ. ರಕ್ಷಾ ಬಂಧನ, ಅಥವಾ ರಾಖಿ, ಒಡಹುಟ್ಟಿದವರ ನಡುವಿನ ಮುರಿಯಲಾಗದ ಮತ್ತು ವಿಶೇಷ ಬಂಧಗಳನ್ನು ಆಚರಿಸುವ ಮಂಗಳಕರ ಹಿಂದೂ ಹಬ್ಬವಾಗಿದೆ. ಈ ಹಬ್ಬವನ್ನು

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..! Read More »

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ Read More »

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ‌ ನಡೆದ ಅಹಿತಕರ ಘಟನೆಗಳ ಸಂಬಂಧ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಸಂಬಂಧ ಕುಡ್ಲ ರಾಂಪೇಜ್’ ಯುಟ್ಯೂಬ್ ಚಾನೆಲ್ ನ ಮಾಲೀಕರಾದ ಅಜಯ್ ಅಂಚನ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ‘ಧರ್ಮಸ್ಥಳದ ಪಾಂಗಾಳ ರಸ್ತೆ ಬಳಿ, ಒಬ್ಬರ

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು Read More »

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡುಗಡೆಯಾಗಿದೆ. 2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ. ಆಯಾ ತಾಲೂಕು ಪಂಚಾಯಿತಿ

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ), ‘ಕದ್ರಿ ಮಂಜುನಾಥ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು. ಆದರೆ, ಜಾರಿ ನಿರ್ದೇಶನಾಲಯವು (ಇ.ಡಿ), ‘ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದಿದೆ. ಎರಡೂ ತನಿಖಾ ಸಂಸ್ಥೆಗಳ ವಿವರಗಳಲ್ಲಿನ ವ್ಯತ್ಯಾಸ ಚರ್ಚೆಗೆ ಕಾರಣವಾಗಿದೆ. 2022ರ ನವೆಂಬರ್‌ನಲ್ಲಿ ಮಂಗಳೂರಿನ ಆಟೋ ಒಂದರಲ್ಲಿ ಸ್ಫೋಟ ಸಂಭವಿಸಿತ್ತು. ಕುಕ್ಕರ್‌ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಎನ್‌ಐಎ ತನಿಖೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್ Read More »

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ Read More »