August 2025

ಮಂಗಳೂರಿನ ‘ಮಂಗಲ ಕಲಶ’ ಮರುಸ್ಥಾಪನೆ

ಸಮಗ್ರ ನ್ಯೂಸ್: ಮಹಾವೀರ ವೃತ್ತದಲ್ಲಿ (ಪಂಪ್‌ವೆಲ್‌) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಮಂಗಲ ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ. ಅದನ್ನು ಸೋಮವಾರ (ಆ. 25) ರಾತ್ರಿ ಪೀಠದ ಮೇಲೆ ತಂದಿರಿಸಲಾಯಿತು. ಪಂಪ್‌ವೆಲ್‌ನಲ್ಲಿ ವಿಸ್ತಾರವಾದ ವೃತ್ತವನ್ನು ನಿರ್ಮಿಸಿ, ಅದಕ್ಕೆ ಮಹಾವೀರ ವೃತ್ತ ಎಂದು 2003ರಲ್ಲಿ ನಾಮಕರಣ ಮಾಡಲಾಗಿತ್ತು. ಆ ವೃತ್ತದ ಕೇಂದ್ರದಲ್ಲಿ ಕಲಶದ ಆಕೃತಿಯನ್ನು ಸ್ಥಾಪಿಸಲಾಗಿತ್ತು. ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಅದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆಯು ಈ ವೃತ್ತದ […]

ಮಂಗಳೂರಿನ ‘ಮಂಗಲ ಕಲಶ’ ಮರುಸ್ಥಾಪನೆ Read More »

ದಾಂಪತ್ಯಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಅದ್ಧೂರಿಯಾಗಿ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 10:56ಕ್ಕೆ ಬೆಂಗಳೂರಿನಲ್ಲಿ ರೋಷನ್ ಅವರು ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿ, ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ದಾಂಪತ್ಯ ಬಂಧನದ ಸಮಾರಂಭವು ಕನ್ನಡ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳ ಉಪಸ್ಥಿತಿಯಿಂದ ಮತ್ತಷ್ಟು ರಂಗುಗೊಂಡಿತು. ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್‌ನಲ್ಲಿ ನಡೆದ ಈ ಮದುವೆ, ಕನ್ನಡಿಗರ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಆಧುನಿಕ ಸೊಗಡನ್ನು ಸಂಯೋಜಿಸಿತ್ತು. ಅರಿಶಿಣ ಶಾಸ್ತ್ರದಿಂದ

ದಾಂಪತ್ಯಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.‌28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಭಾರಿ ಮಳೆ ರಕ್ಷಣೆಗೆ ದನಗಳಿಗೆ ರೈನ್ ಕೋಟ್ ಹಾಕಿ ಮೇಯಲು ಬಿಟ್ಟ ಮಾಲೀಕ| ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕೊಡಗಿನಲ್ಲಿ ಕೆಲ ದಿನಗಳಿಂದ ಮಳೆಗಾಲದ ಮಾಮೂಲಿ ಮಳೆಯಂತೆ ಧಾರಾಕಾರ ಮಳೆಯಾಗುತ್ತಿದ್ದು, ಈ ವೇಳೆ ಕಾಡಿಗೆ ಮೇಯಲು ಬಿಟ್ಟ ಹಸುಗಳಿಗೆ ಹಸುಗಳ ಮಾಲೀಕರು ಅವುಗಳು ಒದ್ದೆಯಾಗದಂತೆ ಪ್ಲಾಸ್ಟಿಕ್ ರೈನ್‌ಕೋಟ್ ಹಾಕಿದಂತಹ ವಿಶೇಷ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Coorgthekashmirofkarnataka ಎಂಬ ಇನ್ಸ್ಟಾ ಗ್ರಾಮ್ ಪೇಜ್‌ನಿಂದ ಈ ವೀಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ವೀಡಿಯೋದಲ್ಲಿ ಬಯಲಿನಲ್ಲಿ ಮೇಯುತ್ತಿರುವ ಎರಡು ಹಸುಗಳಿಗೆ ಒದ್ದೆಯಾಗದಂತೆ ಪ್ಲಾಸ್ಟಿಕ್ ಗೊರಬೆಯನ್ನು ಹಾಕಿರುವುದನ್ನು ಕಾಣಬಹುದಾಗಿದೆ. ನಾಪೋಕ್ಲು ಭಾಗಮಂಡಲ ರಸ್ತೆಯ

ಭಾರಿ ಮಳೆ ರಕ್ಷಣೆಗೆ ದನಗಳಿಗೆ ರೈನ್ ಕೋಟ್ ಹಾಕಿ ಮೇಯಲು ಬಿಟ್ಟ ಮಾಲೀಕ| ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ Read More »

ರಾಜ್ಯಾದ್ಯಂತ ಭಾರೀ ಮಳೆ| 3 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು(ಆ.28) ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇಂದು ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಶಿವಮೊಗ್ಗ ಹಾಗು ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯ ಟಿಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ

ರಾಜ್ಯಾದ್ಯಂತ ಭಾರೀ ಮಳೆ| 3 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು(ಆ.28) ರಜೆ ಘೋಷಣೆ Read More »

ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಣೆಯಲ್ಲಿ ಭಾಗವಹಿಸದಂತೆ ಒತ್ತಾಯಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಿದ್ದಲ್ಲದೇ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ತ್ರಿಶೂರ್‌ನ ಕಡವಲ್ಲೂರಿನ ಸಿರಾಜುಲ್ ಉಲೂಮ್ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಅಲ್ಲಿನ ಖದೀಜಾ ಎಂದು ಗುರುತಿಸಲಾದ ಶಿಕ್ಷಕಿ ತನ್ನ ವಿದ್ಯಾರ್ಥಿಗಳ ಪೋಷಕರಿಗೆ ವಾಯ್ಸ್‌ ನೋಟ್‌ ಅನ್ನು ಕಳುಹಿಸಿ ಮಕ್ಕಳಿಗೆ ಓಣಂ ಆಚರಣೆಯಲ್ಲಿ ಪಾಲ್ಗೊಳ್ಳದಂತೆ ಒತ್ತಾಯಿಸಿರುವುದಾಗಿ ಆರೋಪಿಸಲಾಗಿದೆ. ಆಡಿಯೋ ಸಂದೇಶದಲ್ಲಿ ಶಿಕ್ಷಕಿ, ನಾವು ಮುಸ್ಲಿಮರು ಇಸ್ಲಾಂ ಧರ್ಮವನ್ನು

ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್ Read More »

ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ‌ ಬೇಡ – ಯದುವೀರ್ ಒಡೆಯರ್

ಸಮಗ್ರ ನ್ಯೂಸ್: ಚಾಮುಂಡಿ ಬೆಟ್ಟ ಕೇವಲ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಮೈಸೂರು ರಾಜವಂಶಸ್ಥರೂ ಆಗಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೌಂಟರ್‌ ಕೊಟ್ಟಿದ್ದಾರೆ. ಈ ದೇವಸ್ಥಾನದ ಮೇಲೆ ಜಾತ್ಯತೀತ ಪಟ್ಟಿಯನ್ನು ಹಾಕುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟವು ಭಾರತೀಯ ಧರ್ಮ, ಹಿಂದೂ ಧರ್ಮಕ್ಕೆ ಸೇರಿರುವಂತಹ ಶಕ್ತಿ ಪೀಠ. ಕೋಟ್ಯಂತರ ಮಂದಿ ಚಾಮುಂಡಿ ತಾಯಿಯ ಮೇಲಿನ ನಂಬಿಕೆಯಿಂದ ಬರುತ್ತಾರೆ, ಒಳಿತಾಗಲೆಂದು ಪ್ರಾರ್ಥಿಸುತ್ತಾರೆ. ಅವರ ಹೇಳಿಕೆ ಖಂಡನೀಯವಾದುದು

ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ‌ ಬೇಡ – ಯದುವೀರ್ ಒಡೆಯರ್ Read More »

ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಹೊಸ ರೂಲ್ಸ್

ಸಮಗ್ರ ನ್ಯೂಸ್: ಬೆಂಗಳೂರು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ. ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಕೊಟ್ಟಿಗೆಹಾರ ಚೆಕ್

ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಹೊಸ ರೂಲ್ಸ್ Read More »

ದ.ಕ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ದಿನಗಳಂದು ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶೋತ್ಸವ ಹಬ್ಬ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಗಣೇಶ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪನೆ ಮಾಡಿ ನಂತರ ಗಣೇಶ ವಿಗ್ರಹಗಳನ್ನು ವಿಸರ್ಜನೆ ನಡೆಸುವ ತನಕ ಭಜನೆ, ಆರ್ಕೆಸ್ಟ್ರಾ, ವಾದ್ಯಗೋಷ್ಟಿ, ಸಭಾ/ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ನಿಗದಿತ ದಿನದಂದು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯು ಪ್ರತಿಷ್ಠಾಪನಾ ಸ್ಥಳದಿಂದ ಭವ್ಯ ಮೆರವಣಿಗೆಯಲ್ಲಿ ಟ್ಯಾಬ್ಲೊ, ಚೆಂಡೆ, ಮುಂತಾದ ಸ್ತಬ್ಧ ಚಿತ್ರಗಳೊಂದಿಗೆ ಸಾಗಿ ನಂತರ ಬಾವಿ, ಕೆರೆ, ನದಿಗಳಲ್ಲಿ ವಿಸರ್ಜನೆ ನಡೆಸಲಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ

ದ.ಕ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ದಿನಗಳಂದು ಮದ್ಯ ಮಾರಾಟ ನಿಷೇಧ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ‌ ಯಿಂದ ಚಿನ್ನಯ್ಯ ಮೇಲೆ‌ ಹೊಸ ಸೆಕ್ಷನ್ ಜಾರಿ| ವಿಚಾರಣೆ ವೇಳೆ ಸುಜಾತಾ ಭಟ್ ಕಣ್ಣೀರಿಟ್ಟಿದ್ಯಾಕೆ? ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಡೀಟೈಲ್ಸ್…

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರೋದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಇದರ ಪ್ರಕಾರ, ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೇನೂ ಅಲ್ಲ ಅಂತ ಕೋರ್ಟ್ ಗೆ ಮಾಹಿತಿ ಕೊಟ್ಟಿದೆ. ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಅಂತ ತಿಳಿಸಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ ಅಡಿ ಎಫ್‌ಐಆರ್

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ‌ ಯಿಂದ ಚಿನ್ನಯ್ಯ ಮೇಲೆ‌ ಹೊಸ ಸೆಕ್ಷನ್ ಜಾರಿ| ವಿಚಾರಣೆ ವೇಳೆ ಸುಜಾತಾ ಭಟ್ ಕಣ್ಣೀರಿಟ್ಟಿದ್ಯಾಕೆ? ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಡೀಟೈಲ್ಸ್… Read More »