ರಾಜ್ಯಾದ್ಯಂತ ಸೆ.8ರವರೆಗೂ ಮಳೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವಾರದವರೆಗೆ ಮಳೆ ಮುಂದುವರೆಯಲಿದೆ.

. Ad Widget . Ad Widget . Ad Widget .

ಇಂದು(ಸೆ.3) ಕರ್ನಾಟಕದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಸಹಿತ ಭಾರೀ ಮಳೆ ಮತ್ತು ಗಾಳಿ ಬೀಸುವ ಸಾಧ್ಯತೆ ಇದೆ. ಈ ಪರಿಸ್ಥಿತಿಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಸಾರಿಗೆ ಸೇವೆಗಳಲ್ಲಿ ವ್ಯತ್ಯಯ ಮತ್ತು ಕೆಲವು ಪ್ರದೇಶಗಳಲ್ಲಿ ಪ್ರವಾಹದಂತಹ ಸನ್ನಿವೇಶಗಳು ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮುಂದಿನ ಎರಡು ದಿನಗಳಲ್ಲಿ, ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು ಮತ್ತು ಮಂಡ್ಯದಲ್ಲಿ ಗುಡುಗು ಮತ್ತು ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಪ್ರತಿದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 4 ರಿಂದ ಹವಾಮಾನದಲ್ಲಿ ಕೊಂಚ ಸುಧಾರಣೆಯಾಗುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *