ಧರ್ಮಕ್ಷೇತ್ರಗಳ ವಿರುದ್ಧ ಅಫ್ರಚಾರ ತಡೆಗೆ ಹೊಸ ಕಾನೂನು| ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಷಾ ಭರವಸೆ

ಸಮಗ್ರ ನ್ಯೂಸ್: ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ ಐಎ) ಗೆ ವಹಿಸಬೇಕೆಂದು ಒತ್ತಾಯಿಸಿ, ಕರ್ನಾಟಕದ ಸನಾತನ ಸಂತರ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದೆ.

Ad Widget ... ..

ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಒಟ್ಟು ಎಂಟು ಸ್ವಾಮೀಜಿಗಳು ಭಾಗವಹಿಸಿದ್ದರು.

Ad Widget

ಈ ಭೇಟಿಯ ಸಂದರ್ಭದಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರದ ಕುರಿತು ಸುದೀರ್ಘ ಚರ್ಚೆ ನಡೆದಿವೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ತನಿಖೆಯ ಬಗ್ಗೆ ಸ್ವಾಮೀಜಿಗಳಿಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿದರೆ ಹೆಚ್ಚು ಪಾರದರ್ಶಕವಾಗಿ ಮತ್ತು ಸಮಗ್ರವಾಗಿ ತನಿಖೆ ನಡೆಯಲಿದೆ ಎಂದು ಸ್ವಾಮೀಜಿಗಳ ತಂಡ ಒತ್ತಾಯಿಸಿದೆ.

ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ನೋಡುವಂತೆ ಮಾಡುವ ಷಡ್ಯಂತ್ರವಿದು. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ ಎಂದು ನಿಯೋಗವು ಆರೋಪಿಸಿದೆ. ಸ್ವಾಮೀಜಿಗಳ ನಿಯೋಗವು ಈ ಪ್ರಕರಣವನ್ನು ಎನ್‌ಐಎಗೆ ಶೀಘ್ರವಾಗಿ ವಹಿಸಬೇಕೆಂದು ಮನವಿ ಮಾಡಿದೆ. ಈ ಆರೋಪಗಳ ಹಿಂದೆ ರಾಷ್ಟ್ರವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಸ್ವಾಮೀಜಿಗಳು ಆರೋಪಿಸಿದ್ದಾರೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದು ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಅರಿತಿರುವ ಶಾ, ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ ಎಂದು ಸೂಚಿಸಿದ್ದಾರೆ. ಸ್ವಾಮೀಜಿಗಳು ಈ ಷಡ್ಯಂತ್ರವು ಕೇವಲ ಧರ್ಮಸ್ಥಳಕ್ಕೆ ಸೀಮಿತವಾಗಿಲ್ಲ, ಬದಲಿಗೆ ಇತರ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನೂ ಗುರಿಯಾಗಿಸುತ್ತಿದೆ ಎಂದು ಅಮಿತ್‌ ಶಾ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿಯು ಈ ಆರೋಪಗಳನ್ನು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಕರೆದು, ಎನ್‌‍ಐಎ ತನಿಖೆಗೆ ಒತ್ತಾಯಿಸಿದೆ. ಕಾಂಗ್ರೆಸ್‌‍ ಸರ್ಕಾರವು ಎಸ್‌‍ಐಟಿ ತನಿಖೆಯನ್ನು ಸಮರ್ಥವಾಗಿ ನಡೆಸುತ್ತಿದೆ ಎಂದು ಹೇಳಿದ್ದು, ಎನ್‌ಐಎಗೆ ವಹಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Leave a Comment

Your email address will not be published. Required fields are marked *