ಪುತ್ತೂರು: ಸಹಪಾಠಿಗೆ ಗರ್ಭದಾನ ಮಾಡಿದ ಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ನಿರಾಕರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಗೆ ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

Ad Widget ... ..

ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಲೈಂಗಿಕವಾಗಿ ಬಳಸಿಕೊಂಡು , ಆಕೆ ಗರ್ಭವತಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ ರಾವ್ ವಿರುದ್ದ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಜುಲೈ 5 ರಂದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

Ad Widget

ಈಗಾಗಲೇ ಯುವತಿ ಮಗುವಿಗೆ ಜನ್ಮ ನೀಡಿದ್ದು, ಯುವತಿ ಹಾಗೂ ಮಗು ಹಾಗೂ ಆರೋಪಿ ಕೃಷ್ಣ ಜೆ ರಾವ್ ಅವರ ರಕ್ತ ಮಾದರಿ ಪಡೆದು ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿದೆ.

Leave a Comment

Your email address will not be published. Required fields are marked *